ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಬಜೆಟ್ “ವಿಕಸಿತ ಮತ್ತು ಆತ್ಮನಿರ್ಭರ ಭಾರತದ ಸಂಕಲ್ಪ” ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬಣ್ಣಿಸಿದ್ದಾರೆ. ದೇಶದ ಅಭಿವೃದ್ಧಿ ಮತ್ತು ಸ್ವಾವಲಂಬನೆಗೆ ಈ ಬಜೆಟ್ ಪೂರಕವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿಗೆ ಆಗಮಿಸಿದ್ದು, ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣವನ್ನು ಮಂಡಿಸಲಿದ್ದಾರೆ.



