ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತ್ತೆ ಎಮ್ಮೆ ಹಾಲು ಮಾರಾಟ ನಿಲ್ಲಿಸಲು ಕೆಎಂಎಫ್ ನಿರ್ಧರಿಸಿದೆ. ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಎಮ್ಮೆ ಹಾಲು ಮಾರಾಟ ಸ್ಥಗಿತಗೊಳ್ಳಲಿದೆ ಎನ್ನಲಾಗಿದೆ.
ಕೆಎಂಎಫ್ ಕಳೆದ ವರ್ಷ ಡಿಸೆಂಬರ್‌ನಿಂದ ಎಮ್ಮೆ ಹಾಲು ಉತ್ಪಾದನೆ ಆರಂಭಿಸಿದೆ. ಬೇಡಿಕೆ ಕುಸಿಯುತ್ತಿರುವುದರಿಂದ ಮಾರಾಟ ಮಾಡುವುದನ್ನು ನಿಲ್ಲಿಸುವುದಾಗಿ ತಿಳಿಸಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ರಾಜ್ಯದಲ್ಲಿ ಪ್ರತಿನಿತ್ಯ ಕೇವಲ 2 ಸಾವಿರ ಲೀಟರ್ ಎಮ್ಮೆ ಹಾಲು ಮಾರಾಟವಾಗುತ್ತಿದ್ದು, ಬೆಂಗಳೂರು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪೂರೈಕೆಯಾಗುತ್ತಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 60 ರೂ. ಆದರೆ ಇನ್ನು ಮುಂದೆ ಎಮ್ಮೆ ಹಾಲು ಮಾರಾಟ ಮಾಡದಿರಲು ಕೆಎಂಎಫ್ ನಿರ್ಧರಿಸಿದೆ ಎಂದಿದ್ದಾರೆ.