ಹೊಸ ದಿಗಂತ ವರದಿ, ಮದ್ದೂರು:
ಮಹಿಳೆಯರು ಸ್ವ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ
ನಾಗರತ್ನಸ್ವಾಮಿ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕಾ ವಿಭಾಗ ಜಿ.ಪಂ.ವತಿಯಿಂದ ಚಾಮನಹಳ್ಳಿ ಹಾಗೂ ಕೆಸ್ತೂರು ಜಿ.ಪಂನ 60 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದರು.
ಸರ್ಕಾರ ಮಹಿಳೆಯರಿಗೆ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದು, ಇದರ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಹೊಲಿಗೆ ಯಂತ್ರವನ್ನು ಸದುಪಯೋಗ ಪಡಿಸಿಕೊಂಡು ಸ್ವ ಉದ್ಯೋಗ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ತಿಳಿಸಿದರು.
ಜಿ.ಪಂ ಸದಸ್ಯೆ ಸುಚಿತ್ರ ಮಹೇಂದ್ರ ಕುಮಾರ್, ತಾ.ಪಂ ಸದಸ್ಯ ಚಿಕ್ಕಮರಿಯಪ್ಪ, ಕೈಗಾರಿಕಾ ವಿಸ್ತರಾಣಾಧಿಕಾರಿ ಅಜಿತ್ ಗೌಡ, ಮುಖಂಡ ಮಹೇಂದ್ರಕುಮಾರ್ ಸೇರಿದಂತೆ ಇತರರು ಹಾಜರಿದ್ದರು.