October 9, 2026
Friday, October 9, 2026
spot_img

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕಟ್ಟಡ: ಸುಧಾಮ ನಗರದಲ್ಲಿ ತಪ್ಪಿದ ಭಾರೀ ದುತಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರಿನ ಸುಧಾಮ ನಗರದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಇಡೀ ಪ್ರದೇಶದ ಜನರನ್ನು ಬೆಚ್ಚಿಬೀಳಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿರಬಹುದು ಎನ್ನಲಾದ ಬೆಂಕಿಯ ಕೆನ್ನಾಲಿಗೆಗೆ ನಾಲ್ಕಂತಸ್ತಿನ ಬೃಹತ್ ಕಟ್ಟಡವೊಂದು ಸಂಪೂರ್ಣವಾಗಿ ಆಹುತಿಯಾಗಿದೆ.

ಈ ದುರಂತದಲ್ಲಿ ಕೆಳಮಹಡಿಯಲ್ಲಿದ್ದ ಹೆಲ್ಮೆಟ್ ಹಾಗೂ ಮೊಬೈಲ್ ಅಂಗಡಿಗಳು ಸುಟ್ಟು ಬೂದಿಯಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸುಟ್ಟು ಕರಕಲಾದ ಅಂಗಡಿಗಳು

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಕೆಳಮಹಡಿಯ ಅಂಗಡಿಗಳು ಸಂಪೂರ್ಣವಾಗಿ ಕರಕಲಾಗಿದ್ದವು.  

ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ

ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಕಟ್ಟಡದಲ್ಲಿದ್ದ ನಿವಾಸಿಗಳು ಸಮಯಪ್ರಜ್ಞೆ ಮೆರೆದು ತಕ್ಷಣವೇ ಹೊರಗೆ ಓಡಿಬಂದಿದ್ದರಿಂದ ಯಾವುದೆ ಜೀವಹಾನಿ ಉಂಟಾಗಿಲ್ಲ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Must Read