ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಸಹಿತ ಇಬ್ಬರು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ.ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈ ನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್‌ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!