ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ.
ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ನಡೆದಿದೆ.
ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅವಶೇಷಗಳಡಿ ಸಿಲುಕಿರುವ ಉಳಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.