ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 14 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಸುಮಾರು ಹತ್ತಕ್ಕೂ ಹೆಚ್ಚು ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎನ್ನಲಾಗಿದೆ.
ಈ ಘಟನೆ ಬೆಳಗಿನ ಜಾವ 3 ಗಂಟೆಗೆ ನಡೆದಿದೆ ಎಂದು ಈಶಾನ್ಯ ಜಿಲ್ಲೆಯ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಸಂದೀಪ್ ಲಂಬಾ ತಿಳಿಸಿದ್ದಾರೆ.
“ಹದಿನಾಲ್ಕು ಜನರನ್ನು ರಕ್ಷಿಸಲಾಯಿತು, ಆದರೆ ಅವರಲ್ಲಿ ನಾಲ್ವರು ಸಾವನ್ನಪ್ಪಿದರು… ಅದು ನಾಲ್ಕು ಅಂತಸ್ತಿನ ಕಟ್ಟಡವಾಗಿತ್ತು… ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 8-10 ಜನರು ಇನ್ನೂ ಸಿಲುಕಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.
ಅಧಿಕಾರಿಗಳ ಪ್ರಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ದೆಹಲಿ ಪೊಲೀಸರ ತಂಡಗಳು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.