ಹೊಸದಿಗಂತ ಡಿಜಿಟಲ್ ಡೆಸ್ಕ್;
ದೆಹಲಿಯ ದರಿಯಾಗಂಜ್‌ನ ಸದ್ಭಾವನಾ ಪಾರ್ಕ್ ಬಳಿ ಬುಧವಾರ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂರು ಮಹಡಿಗಳ ಕಟ್ಟಡ ಕುಸಿದು ಬಿದ್ದಿದ್ದು, ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವಶೇಷಗಳಿಂದ ಮೂವರನ್ನು ರಕ್ಷಿಸಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.