July 8, 2026
Wednesday, July 8, 2026
spot_img

ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಪತನ: ಕಾಂಕ್ರೀಟ್ ರಾಶಿಯಡಿ ಸಿಲುಕಿದ 8ಕ್ಕೂ ಹೆಚ್ಚು ಮಂದಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜಧಾನಿ ದೆಹಲಿಯಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆಯೇ ಭೀಕರ ಅಪಘಾತವೊಂದು ಸಂಭವಿಸಿದೆ. ನವದೆಹಲಿಯ ರೋಹಿಣಿ ಸೆಕ್ಟರ್ 16ರ ಎಂಸಿಡಿ (MCD) ಶಾಲೆ ಎದುರು ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದು ಬುಧವಾರ ಸಂಜೆ ಹಠಾತ್ತನೆ ಧರಾಶಾಹಿಯಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಕನಿಷ್ಠ 8 ಜನರು ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದ್ದು, ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ:

ಕಟ್ಟಡ ಕುಸಿಯುತ್ತಿದ್ದಂತೆ ಜೋರಾದ ಶಬ್ದ ಕೇಳಿ ಸ್ಥಳೀಯ ನಿವಾಸಿಗಳು ತಕ್ಷಣವೇ ಧಾವಿಸಿ ಬಂದು ತಮ್ಮ ಬರಿಗೈಯಿಂದಲೇ ಇಟ್ಟಿಗೆ ಹಾಗೂ ಕಬ್ಬಿಣದ ಕಂಬಗಳನ್ನು ಸರಿಸಿ ಜನರನ್ನು ರಕ್ಷಿಸಲು ಮುಂದಾದರು. ವಿಷಯ ತಿಳಿಯುತ್ತಿದ್ದಂತೆ ದೆಹಲಿ ಅಗ್ನಿಶಾಮಕ ದಳದ (DFS) 4 ವಾಹನಗಳು, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸ್ಥಳಕ್ಕೆ ದೌಡಾಯಿಸಿವೆ. ಜೆಸಿಬಿ ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ:

ಅಧಿಕಾರಿಗಳ ಮಾಹಿತಿ:

“ಕಟ್ಟಡ ಕುಸಿದಿರುವ ಬಗ್ಗೆ ಸಂಜೆ 4:19ಕ್ಕೆ ನಮಗೆ ಕರೆ ಬಂದಿತು. ತಕ್ಷಣ ರಕ್ಷಣಾ ತಂಡಗಳನ್ನು ರವಾನಿಸಲಾಗಿದೆ. ಅವಶೇಷಗಳ ನಡುವೆ ಸಿಲುಕಿರುವವರನ್ನು ಸಂಪರ್ಕಿಸಲು ಸಣ್ಣ ರಂಧ್ರಗಳ ಮೂಲಕ ಪ್ರಯತ್ನಿಸಲಾಗುತ್ತಿದೆ. ಕಾರ್ಯಾಚರಣೆ ಮುಗಿಯುವವರೆಗೂ ನಿಖರವಾದ ಸಂಖ್ಯೆಯನ್ನು ಹೇಳಲು ಸಾಧ್ಯವಿಲ್ಲ” ಎಂದು ದೆಹಲಿ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !