ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಇದರಂತೆ ಈ ಮೂವರು ನಾಯಕರು ಗುರುವಾರವೇ ದೆಹಲಿಗೆ ತೆರಳಬೇಕಿದೆ.
ಗುರುವಾರ ಮಧ್ಯಾಹ್ನ 3.30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ ಸೂಚನೆ ನೀಡಲಾಗಿದೆ.
ಈ ಮಧ್ಯೆ, ಹೈಕಮಾಂಡ್ನಿಂದ ಕರೆ ಬಂದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ನನ್ನ ಜೊತೆಗೆ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಪಿ.ಸಿ. ಮೋಹನ್ ಅವರಿಗೂ ಬರಲು ಹೇಳಿದ್ದಾರೆ. ಯಾಕೆ ಕರೆದಿದ್ದಾರೆ ಗೊತ್ತಿಲ್ಲ. ಅಲ್ಲಿಗೆ ಹೋದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.