ಹೆದ್ದಾರಿಯಲ್ಲಿ ಗ್ಯಾಸ್ ಸಿಲಿಂಡ‌ರ್ ಸಾಗಾಟ ಪಲ್ಟಿ: ಅನಿಲ ಸೋರಿಕೆ, ಆತಂಕದಲ್ಲಿ ಸುಳ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್‌ಪಿಜಿ ಸಿಲಿಂಡರ್‌ ಸಾಗಾಟದ ಲಾರಿ, ಸುಳ್ಯ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಸೋಮವಾರ ಸಂಜೆ ಪಲ್ಟಿಯಾಗಿದ್ದು, ಈ ವೇಳೆ ಅನಿಲ ಸೋರಿಕೆಯಾಗಿ ಇಲ್ಲಿನ ಸ್ಥಳೀಯ ಪರಿಸರದಲ್ಲಿ ಆತಂಕ ಮೂಡಿಸಿತು.

ಮಡಿಕೇರಿ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಜೋರಾಗಿ ಸುರಿಯುವ ಮಳೆಯ ಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಲಾರಿಯಲ್ಲಿದ್ದ ಸಿಲಿಂಡರ್‌ವೊಂದರಿಂದ ಗ್ಯಾಸ್ ಸೋರಿಕೆಯಾಗಿದೆ. ಘಟನೆ ನಡೆಯುತ್ತಲೇ ಈ ಭಾಗದಲ್ಲಿ ವಾಹನ ಸಂಚಾರವನ್ನು ತಡೆಯಲಾಯಿತು. ಸ್ಥಳಕ್ಕೆ ಧಾವಿಸಿದ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!