ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ.