ಪತ್ರಕರ್ತರಲ್ಲಿ ಗೂಂಡಾಗಿರಿಯ ವರ್ತನೆ: ಡಿ.ಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್‍ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿ ನೀಡಿದ ಅವರು, ಇಂ ಡಿಕೆಶಿವಕುಮಾರ್ ಅವರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಅದೇ ದಿನ ದೇಶದ ಗೃಹಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿ ಇದ್ದರು. ಕೆಲ ಪತ್ರಕರ್ತರು ಡಿಕೆಶಿ ಸುದ್ದಿಗೋಷ್ಠಿಗೆ ಬಂದಿಲ್ಲ, ಬಾರದವರ ಹೆಸರು ಬರೆದುಕೊಳ್ಳಿ. ಅವರ ಮ್ಯಾನೇಜ್ಮೆಂಟ್ ಜೊತೆ ಮಾತಾಡ್ತೀನಿ ಎಂದು ತಿಳಿಸಿದ ಶಿವಕುಮಾರ್, ಪತ್ರಕರ್ತರು ಚುನಾವಣಾ ಸಂದರ್ಭದಲ್ಲಿ ಒತ್ತಡದಲ್ಲಿ ಕೆಲಸ ಮಾಡುವುದನ್ನು ಮರೆತು ನಾನು ಪತ್ರಕರ್ತರನ್ನ ಕೊಂಡುಕೊಳ್ಳಬಲ್ಲೆ ಎಂದಿದ್ದಾರೆ. ಅವರ ಮ್ಯಾನೇಜ್ಮೆಂಟ್ ಹೇಳಿ ಕೆಲಸದಿಂದ ತೆಗೆಸುತ್ತೀನಿ ಅಂತ ಹೇಳಿದ್ದಾರೆ. ಅಲ್ಲದೆ ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು.

ಪತ್ರಕರ್ತರ ಜೊತೆ ನಾವಿದ್ದೇವೆ. ಪತ್ರಕರ್ತರನ್ನು ಹೆದರಿಸಿದ ಡಿಕೆಶಿ ವಿರುದ್ಧ ಕ್ರಮಕೈಗೊಳ್ಳಬೇಕು. ಕೂಡಲೇ ಡಿಕೆಶಿಗೆ ನೋಟೀಸ್ ಹೊರಡಿಸಬೇಕು ಅಂತ ಮನವಿ ಮಾಡಿದ್ದೇವೆ ಎಂದು ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!