ಕೇಂದ್ರ ಬಜೆಟ್​ನಲ್ಲಿ ಕ್ರೀಡಾಕ್ಷೇತ್ರಕ್ಕೂ ಇದೆ ಬಂಪರ್ ಕೊಡುಗೆ: ಕಳೆದ ವರ್ಷಕ್ಕಿಂತ ಹೆಚ್ಚುವರಿ ಅನುದಾನ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದ ಬಜೆಟ್​ನಲ್ಲಿ ಕ್ರೀಡಾಕ್ಷೇತ್ರಕ್ಕೆ ಕಳೆದ ವರ್ಷಕ್ಕಿಂತ ಹೆಚ್ಚುವರಿಯಾಗಿ 305.58 ಕೋಟಿ ರೂಗಳನ್ನು ಹಂಚಿಕೆ ಮಾಡಲಾಗಿದೆ.
ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ ಬಜೆಟ್ ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, 2022-23ರ ಹಣಕಾಸಿ ವರ್ಷಕ್ಕೆ 3062.60 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
2021-22ರ ಕೇಂದ್ರ ಬಜೆಟ್​ನಲ್ಲಿ 2596.14 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಪ್ರಸ್ತುತ ಬಜೆಟ್​ನಲ್ಲಿ 305 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ.
ಈ ವರ್ಷದಲ್ಲಿ ದೇಶದಲ್ಲಿ ಕಾಮನ್​ವೆಲ್ತ್​ ಗೇಮ್ಸ್​ ಮತ್ತು ಏಷ್ಯನ್​ ಗೇಮ್ಸ್ ಆಯೋಜನೆ ಆಗಲಿರುವುದರಿಂದ ಬಜೆಟ್​ನಲ್ಲಿ ಪ್ರಾಮುಖ್ಯತೆ ನೀಡಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಲಾಗಿದೆ.
ಅದೇ ರೀತಿ ರಾಷ್ಟ್ರೀಯ ಯುವ ಸಬಲೀಕರಣ ಕಾರ್ಯಕ್ರಮಕ್ಕೆ 30 ಕೋಟಿ ರೂ. ಹೆಚ್ಚಿಸಿ 138 ಕೋಟಿ ರೂ. ಮತ್ತು ಖೇಲೋ ಇಂಡಿಯಾ ಕಾರ್ಯಕ್ರಮಕ್ಕೆ 974 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!