ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ನಾಲ್ವರು ಕೇಂದ್ರ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.
30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಮುಖ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದೆ.
ಹೆಚ್.ಡಿ ಕುಮಾರಸ್ವಾಮಿ – ಉಕ್ಕು ಮತ್ತು ಬೃಹತ್ ಕೈಗಾರಿಕೆ
ಪ್ರಹ್ಲಾದ್ ಜೋಶಿ – ಆಹಾರ ಮತ್ತು ನಾಗರೀಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ
ಶೋಭಾ ಕರಂದ್ಲಾಜೆ – ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ
ವಿ. ಸೋಮಣ್ಣ – ಜಲಶಕ್ತಿ ರಾಜ್ಯಖಾತೆ, ರೈಲ್ವೇ ಸಚಿವ ರಾಜ್ಯಖಾತೆ
ಭಾನುವಾರ ಮೋದಿ ಸಂಪುಟದ ನೂತನ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು 2ನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ಮೊದಲಬಾರಿಗೆ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿದ್ದಾರೆ.