ಈ ಬಾರಿಯ ಬಜೆಟ್ ನಲ್ಲಿ ದಲಿತರಿಗೆ ಬಂಪರ್ ಗಿಫ್ಟ್: ಸಿಎಂ ಸಿದ್ದರಾಮಯ್ಯ ಸುಳಿವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಬಜೆಟ್ ನಲ್ಲಿ ದಲಿತರಿಗೆ ಬಂಪರ್ ಗಿಫ್ಟ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಮುಖಂಡರುಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ ಅವರು, ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ ಎಂದು ಹೇಳಿದ್ದಾರೆ.

ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!