ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಕೊಡುಗೆ: 4% ತುಟ್ಟಿಭತ್ಯೆ ಹೆಚ್ಚಳ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರವು (Central Government) ಬಂಪರ್‌ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ (Central Government Employees) ತುಟ್ಟಿಭತ್ಯೆಯನ್ನು (DA Hike) ಶೇ.4ರಷ್ಟು ಏರಿಕೆ ಮಾಡಿದ್ದು, ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ.

ತುಟ್ಟಿ ಭತ್ಯೆಯ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್‌ (HRA) ಕೂಡ ಏರಿಕೆ ಮಾಡಿದೆ. ಅಷ್ಟೇ ಅಲ್ಲ, ಗ್ರ್ಯಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ.

ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರ್ಕಾರವು ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ನೀಡುತ್ತದೆ. ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಲಾಗುತ್ತದೆ. ಇದು ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡುತ್ತದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!