ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮಾತ್ ಉಲ್ ಉಗ್ರ ಸಂಘಟನೆಯ ಕೃತ್ಯಗಳಿಗೆ ಭಾರತದಲ್ಲಿ ಉತ್ತೇಜನ ನೀಡಿದ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಾಹಿದುಲ್ ಇಸ್ಲಾಂ ಅಲಿಯಾಸ್ ಕೌಸರ್ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಜಹಿದುಲ್‌ಗೆ 57,000 ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ ಶಿಕ್ಷೆಯಾಗಿದೆ.
ಬುರ್ದ್ವಾನ್ ಸ್ಫೋಟ ಪ್ರಕರಣದ ತನಿಖೆಯ ಸಮಯದಲ್ಲಿ ಏಜೆನ್ಸಿಯ ಕೋಲ್ಕತ್ತಾ ಶಾಖೆಯ ಕಚೇರಿಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ 2019 ರ ಜೂನ್ನಲ್ಲಿ ಬೆಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.