ಹಾಡಹಗಲೇ ಮನೆಗೆ‌ ನುಗ್ಗಿ ಕಳ್ಳತನ: ಆರೋಪಿ ಬಂಧನ

ಹೊಸದಿಗಂತ ವರದಿ,ಮಡಿಕೇರಿ:

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಕಿವಿಯೋಲೆಯನ್ನು ಕಿತ್ತು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಗೌಳಿಬೀದಿಯಲ್ಲಿ ವಾಸವಿರುವ ಲೋಕೇಶ್ (37) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಖಾಸಗಿ ಸಂಸ್ಥೆಯಲ್ಲಿ ಅಡವಿಡಲಾಗಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನದ ಸರ, 1 ಕಿವಿ ಓಲೆಯನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳವಾರ ಮಧ್ಯಾಹ್ನ ಹಳೆಯ ಖಾಸಗಿ ಬಸ್ ನಿಲ್ದಾಣದ ಮೇಲ್ಭಾಗದ ಅಪ್ಪಚ್ಚ ಕವಿ ರಸ್ತೆಯ ಒಂಟಿ ಮನೆಗೆ ನುಸುಳಿದ ಆರೋಪಿ ಮಹಿಳೆಯಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ.
ಆರೋಪಿ ಈ ರಸ್ತೆಯಲ್ಲಿ ಸಂಚರಿಸಿರುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!