Sunday, September 7, 2025

ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್ ಐಟಿ ಮುಂದೆ ‘ಅನಾಮಿಕ’ ಹಾಜರು, ತನಿಖೆ ಶುರು

ಹೊಸದಿಗಂತ ವರದಿ,ಮಂಗಳೂರು:

ಕುತೂಹಲ ಕೆರಳಿಸಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡದ(ಎಸ್‌ಐಟಿ) ಎದುರು ದೂರುದಾರ ವ್ಯಕ್ತಿ ಶನಿವಾರ ವಕೀಲರೊಂದಿಗೆ ಹಾಜರಾಗಿದ್ದಾರೆ.

ಕದ್ರಿಯಲ್ಲಿರುವ ಐಬಿ ಕಚೇರಿಗೆ ದೂರುದಾರ ತನ್ನ ಪರ ವಕೀಲರ ಜೊತೆ ಆಗಮಿಸಿದ್ದು, ಬಳಿಕ ಡಿಐಜಿ ಎಂ.ಎನ್. ಅನುಚೇತ್ ಸಮ್ಮುಖದಲ್ಲಿ ವಿಚಾರಣೆ ನಡೆದಿದೆ.

ಇದಕ್ಕೂ ಮೊದಲು ಐಬಿ ಕಚೇರಿಯಲ್ಲಿ ಡಿಐಜಿ ಎಂ.ಎನ್. ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ್ ಹಾಗೂ ದ.ಕ, ಉಡುಪಿ, ಉ.ಕ ಜಿಲ್ಲೆಗಳಿಂದ ನೇಮಿಸಲ್ಪಟ್ಟ ತನಿಖಾ ತಂಡದ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಇದರಲ್ಲಿ ಧರ್ಮಸ್ಥಳ, ಮೂಲ್ಕಿ, ಬೈಂದೂರು ಇನ್‌ಸ್ಪೆಕ್ಟರ್‌ಗಳು ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ