ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು, ಮನೆಯಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ.
ಬೆಂಕಿ ಹೊತ್ತಿದ್ದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಸ್ಥಳದಲ್ಲಿ ಸುಟ್ಟು ಕರಕಲಾದ ಸಿಲಿಂಡರ್ ಹಾಗೂ ರೆಗ್ಯುಲೇಟರ್ ದೊರೆತಿದೆ.
ಒಂದೇ ಕುಟುಂಬದ ಅಂಕುಶ್ ಕುಮಾರ್, ಶಿವಾನಿ ಕುಮಾರಿ, ಸೋನಿ, ಸೀಮಾ ಮತ್ತು ಅಂಶು ಮೃತಪಟ್ಟಿದ್ದಾರೆ.
ಮಕ್ಕಳು ಮನೆಯಲ್ಲಿ ಮಲಗಿದ್ದ ವೇಳೆ ಈ ಅವಗಢ ಸಂಭವಿಸಿದೆ. ಮಕ್ಕಳನ್ನು ಉಳಿಸಲು ಯತ್ನಿಸಿದ ತಂದೆ ಅಶೋಕ್ ಪಸ್ವಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.