ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಮಂಗಲದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ್ದಾರೆ.
ಗೃಹ ಸಚಿವರು ಇದೊಂದು ಚಿಕ್ಕ ಘಟನೆ ಎಂದಿದ್ದಾರೆ. ಹಿಂದೂಗಳ 25 ಅಂಗಡಿ ಸುಟ್ಟದ್ದು ನಿಮಗೆ ಚಿಕ್ಕ ಘಟನೆಯಾಗಿ ಕಂಡರೆ ಇನ್ನು ದೊಡ್ಡ ಘಟನೆ ಏನಾಗಬೇಕಾಗಿತ್ತು ಎಂದು ಪ್ರಶ್ನಿಸಿದ್ದಾರೆ.
ಎನ್‌ಐಎ ತನಿಖೆ ಮಾಡಿದರೆ ಮಾತ್ರ ಸತ್ಯಾಂಶ ಹೊರಕ್ಕೆ ಬರಲಿದೆ. ನಾಗಮಂಗಲದ ಘಟನೆಯಿಂದ ನಮ್ಮೆಲ್ಲ ಹಿಂದೂಗಳಿಗೆ ಅಪಮಾನ ಆಗಿದೆ. ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಚಪ್ಪಲಿ ಎಸೆದಿದ್ದಾರೆ. ಕಲ್ಲು ಎಸೆದಿದ್ದಾರೆ. ಅಲ್ಲದೆ ನಮ್ಮ ಅಂಗಡಿಗಳನ್ನು ಸುಟ್ಟಿದ್ದಾರೆ ಎಂದು ಆಕ್ಷೇಪಿಸಿದರು