ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ರೇವಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು 14 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ಬಸ್ ತೆರಳುತ್ತಿತ್ತು. ಪ್ರಯಾಣಿಕರು ದೀಪಾವಳಿ ಆಚರಿಸಲು ತಮ್ಮ ಊರುಗಳಿಗೆ ತೆರಳುತ್ತಿದ್ದರು.
ಅಪಘಾತ ಆದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಜಖಂಗೊಂಡ ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.