ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾರೀ ಮಂಜಿನ ಕಾರಣ ದಾರಿ ಕಾಣದ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಮಂದಿ ದುರ್ಮರಣಕ್ಕೀಡಾಗಿದ್ದಾರೆ ಮತ್ತು 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚಿತ್ತೂರಿನಿಂದ ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀರಾಮ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಇಂದು ಮುಂಜಾನೆ ಅರಣ್ಯದ ತಿರುವಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

