ಭೀಕರ ರಸ್ತೆ ಅಪಘಾತ: 10 ಮಂದಿ ಸಾವು, 8 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯ ದಿಗಪಹಂಡಿಯಲ್ಲಿ ನಡೆದಿದೆ.

ಭಾನುವಾರ ತಡರಾತ್ರಿ ಬರ್ಹಾಂಪುರದಿಂದ ಹಿಂತಿರುಗುತ್ತಿದ್ದ ಖಾಸಗಿ ಬಸ್ ರಾಯಗಡ ಜಿಲ್ಲೆಯ ಗುಡಾರಿಯಿಂದ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೀಡಾದ ಎರಡು ಬಸ್‌ಗಳ ಪೈಕಿ ಒಂದರ ಚಾಲಕ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೊಂದು ಬಸ್‌ನ ಚಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!