Wednesday, December 10, 2025

ಸೌದಿ ಅರೇಬಿಯಾದಲ್ಲಿ ಬಸ್ ದುರಂತ: ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ.

ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್ ಶೋಯಾಬ್ ಎನ್ನುವಾತ ಬದುಕುಳಿದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅವರ ಸ್ಥಿತಿ ಕುರಿತು ಇನ್ನೂ ಮಾಹಿತಿ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ನಿವಾಸಿಗಳು ಎಂದು ವರದಿಯಾಗಿದೆ. ಈ ಪೈಕಿ 16 ಮಂದಿ ಮಲ್ಲೇಪಲ್ಲಿ ನಿವಾಸಿಗಳು.

ಭಾನುವಾರ ಸುಮಾರು ರಾತ್ರಿ 11 ಗಂಟೆ (ಸೌದಿ ಅರೇಬಿಯಾ ಕಾಲಮಾನ) ಸುಮಾರಿಗೆ ಬಸ್ ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಲ್ಲೇಪಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣಿಸುತ್ತಿದ್ದರು. ಅಪಘಾತದ ನಂತರ, ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ 24/7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

error: Content is protected !!