ಕೆಎಸ್‌ಆರ್‌ಟಿಸಿ ಬಸ್-‌ ಬೈಕ್‌ ಮುಖಾಮುಖಿ ಡಿಕ್ಕಿ: ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ‌

ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಚಿಕ್ಕೋಡಿ ತಾಲೂಕಿನ ಕೆರೂರ ಕೆನಾಲ್ ಬಳಿ ಈ ದುರಂತ ಸಂಔವಿಸಿದ್ದು, ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಚಿಕ್ಕೋಡಿಯಿಂದ ಅಂಕಲಿ ಕಡೆಗೆ ಹೊರಟ ದ್ವಿಚಕ್ರ ವಾಹನ ಮುಖಾಮುಖಿ ಅಪ್ಪಳಿಸಿದ ಪರಿಣಾಮ ಬೈಕ್‌ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಬಸ್ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಕೆಎಸ್ಆರ್ಟಿಸಿ ಡಿಪೋ ಮ್ಯಾನೆಜರ್ ಸೇರಿ ಹಲವರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!