Wednesday, June 29, 2022

Latest Posts

ಬಸ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು – ತಿ.ನರಸೀಪುರ ಹೆದ್ದಾರಿಯಲ್ಲಿ ಇಂದು ಸಂಭವಿಸಿದೆ.ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ತಿ.ನರಸೀಪುರದಿಂದ ಮೈಸೂರಿನತ್ತ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಮೈಸೂರಿನಿಂದ ತಿ.ನರಸೀಪುರದ ಕಡೆ ಹೋಗುತ್ತಿದ್ದ ಬಸ್ ವರಕೋಡು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪದ ತಿರುವಿನಲ್ಲಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss