ದೆಹಲಿಯಲ್ಲಿ ಬಸ್ ನಲ್ಲಿ ಪಟಾಕಿಗೆ ಬೆಂಕಿ: ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಬಸ್ ನಲ್ಲಿ ಪಟಾಕಿ ಕೊಂಡೊಯ್ಯುತ್ತಿದ್ದಾಗ ಬೆಂಕಿ ತಗುಲಿ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ.

ಪಟಾಕಿ ಕೊಂಡೊಯ್ಯುತ್ತಿದ್ದ ವ್ಯಕ್ತಿ ಹಾಗೂ ಆತನ ಸಹ ಪ್ರಯಾಣಿಕನಿಗೆ ಗಾಯಗಳಾಗಿವೆ. ದ್ವಾರಕಾದ ಛಾವಾಲಾ ಪ್ರದೇಶದಲ್ಲಿ ಅವರು ಹೊತ್ತೊಯ್ಯುತ್ತಿದ್ದ ಕೆಲವು ಪಟಾಕಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಬಸ್‌ನಲ್ಲಿದ್ದ ವ್ಯಕ್ತಿ ಮತ್ತು ಅವರ ಸಹ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟವನ್ನು ಸೂಚಿಸುವ ಯಾವ ವಸ್ತುವೂ ಇಲ್ಲಿಯವರೆಗೆ ಕಾಣಿಸಿಕೊಂಡಿಲ್ಲ ಎಂದು ಅವರು ಹೇಳಿದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!