ಪಲ್ಟಿಯಾದ 50 ಪ್ರಯಾಣಿಕರಿದ್ದ ಬಸ್: ಹಲವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಜ್ಮೀರ್‌ನಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಬುಧವಾರ ರಾಷ್ಟ್ರ ರಾಜಧಾನಿ ಪ್ರದೇಶದ ಗುರುಗ್ರಾಮ್ ಬಳಿಯ ರಾಜೋಕ್ರಿ ಎಂಬಲ್ಲಿ ಪಲ್ಟಿಯಾಗಿದೆ.

ದೆಹಲಿ ವಿಮಾನ ನಿಲ್ದಾಣದ ಬಳಿಯ ರಾಜೋಕ್ರಿ ಮೇಲ್ಸೇತುವೆ ಬಳಿ ನಡೆದ ಘಟನೆಯಲ್ಲಿ ಮಹಿಳೆ ಮತ್ತು ಮಗು ಸೇರಿದಂತೆ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!