ಚುನಾವಣಾ ಸಿಬ್ಬಂದಿ ತೆರಳುತ್ತಿದ್ದ ಬಸ್ ಪಲ್ಟಿ: ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣಾ ‌ಕರ್ತವ್ಯದ ಭಾಗವಾಗಿರುವ ತರಬೇತಿ ಕಾರ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಯ ಬಸ್ ಪಲ್ಟಿಯಾಗಿ ಹಲವಾರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 12ಕ್ಕೂ ಹೆಚ್ಚು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್​ಆರ್​ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!