ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಫ್ಘಾನಿಸ್ತಾನ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಮುಗಚಿ ಬಿದ್ದು ಕನಿಷ್ಠ 12 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇರಾನ್ನೊಂದಿಗಿನ ಟರ್ಕಿಯ ಗಡಿಯ ಬಳಿ ಇರುವ ಮುರ್ದಿಯಾ ಜಿಲ್ಲೆಯ ವಾನ್ ಪ್ರಾಂತ್ಯದಲ್ಲಿ ಬಸ್ ಕಮರಿಗೆ ಬಿದ್ದು ಬೆಂಕಿ ಹತ್ತಿಕೊಂಡ ಪರಿಣಾಮ ಈ ದುರ್ಘನೆ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 12 ಮಂದಿ ಬಲಿಯಾಗಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ಬಗೆಗಿನ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಬಸ್ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ.