September 30, 2026
Wednesday, September 30, 2026
spot_img

ಧಗಧಗನೇ ಹೊತ್ತಿ ಉರಿದ ಬಸ್‌: 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ತಪ್ಪಿದ ಭಾರೀ ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಘಟನೆ ಒಂದು ದೊಡ್ಡ ಅನಾಹುತವನ್ನು ತಪ್ಪಿಸಿದೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರೂ, ಎಲ್ಲರೂ ಸಮಯಕ್ಕೆ ಹೊರಬಂದು ಸುರಕ್ಷಿತವಾಗಿ ಪಾರಾಗಿದ್ದಾರೆ.

ಬೆಂಗಳೂರುದಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಈ ಬಸ್ ಹೆದ್ದಾರಿಯ ಕಾಮಗಾರಿ ಕಾರಣ ನಿಧಾನವಾಗಿ ಸಾಗುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಕಾಣಿಸಿಕೊಂಡು, ಕೆಲವು ನಿಮಿಷಗಳಲ್ಲಿ ಬಸ್ ಸಂಪೂರ್ಣ ಅಗ್ನಿಗಾಹುತಿಯಾಯಿತು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಘಟನೆಯಲ್ಲಿ ಪ್ರಯಾಣಿಕರ ಪ್ರಾಣಹಾನಿ ಸಂಭವಿಸದಿದ್ದರೂ, ಬಸ್‌ನಲ್ಲಿದ್ದ ಪ್ರಯಾಣಿಕರ ಲಗೇಜ್ ಹಾಗೂ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ.

ಇದೇ ವೇಳೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Must Read