ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆ ನಗರದ ಕದಂಬಾಗ್ ಬಳಿ ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪುಣೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿದ್ದಾರೆ.
ಘಟನೆ ಕುರಿತು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ.