ಉ.ಪ್ರದೇಶದ ಹತ್ರಾಸ್ ನಲ್ಲಿ ವ್ಯಾನ್ ಗೆ ಬಸ್ ಡಿಕ್ಕಿ: 17 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರಪ್ರದೇಶದ ಹತ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ರಸ್ತೆ ಮಾರ್ಗದಲ್ಲಿ ವ್ಯಾನ್ ಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಹದಿನೇಳು ಮಂದಿ ಮೃತಪಟ್ಟಿದ್ದಾರೆ.

ಹತ್ರಾಸ್‌ನಲ್ಲಿ 11 ಮಂದಿ ಗಾಯಾಳುಗಳು ಮತ್ತು ಅಲಿಗಢದಲ್ಲಿ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹತ್ರಾಸ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಕುಮಾರ್ ಇಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ನಿನ್ನೆ ಕನಿಷ್ಠ 15 ಜನರು ಮೃತಪಟ್ಟಿದ್ದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಆರ್ಥಿಕ ನೆರವು ನೀಡಲು ಆದೇಶ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕನ್ವರ್‌ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು.

ಮೃತರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಅವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!