ಕಾರಿಗೆ ಬಸ್ ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸರ್ಕಾರಿ ಅಭಿಯೋಜಕರ ಕುಟುಂಬ

ಹೊಸದಿಗಂತ ಚಿತ್ರದುರ್ಗ:

ಚಿತ್ತದುರ್ಗ ಪೋಕ್ಸೋ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಜಗದೀಶ್ ಅವರ ಕಾರು ಭೀಕರ ಅಪಘಾತವಾಗಿದ್ದು, ಅದೃಷ್ಟವಶಾತ್ ಜಗದೀಶ್ ಹಾಗೂ ಅವರ ಕುಟುಂಬದ ಸದಸ್ಯರು ಪ್ರಾಣಾಪಯಾದಿಂದ ಪಾರಾಗಿದ್ದಾರೆ.

ಹಿರಿಯೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜವನಗೊಂಡನಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಬರುವಾಗ ಈ ಘಟನೆ ನಡೆದಿದ್ದು, ಹಿಂಬದಿಯಿಂದ ಬಂದ ಕೆ.ಎಸ್‍.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದಿದೆ. ನ.3 ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಗದೀಶ್, ಅವರ ಪತ್ನಿ ನಾಗವೇಣಿ ಹಾಗೂ ಸಹೋದರಿ ಲತಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೋಕ್ಸೋ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಜಗದೀಶ್ ವಾದ ಮಾಡುತ್ತಿದ್ದರು. ಇತ್ತೀಚೆಗೆ ಮುರುಘಾ ಶರಣರ ಪ್ರಕರಣದಲ್ಲೂ ಜಗದೀಶ್ ಸಮರ್ಥವಾಗಿ ವಾದ ಮಂಡಿಸಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!