ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ಗಾಯಗೊಂಡವರ ಪೈಕಿ ಎಂಟು ವರ್ಷದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.