ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಸಕಲೇಶಪುರದ ಮಳಲಿ ಬೈಪಾಸ್ ನಲ್ಲಿ ಬ್ರೇಕ್ ವೈಫಲ್ಯದಿಂದ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.