ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.
ರಾಯಚೂರಿನ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸುದೀಪ್ (18) ಹಾಗೂ ರಾಮಪ್ಪ (60) ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ನಿರ್ವಾಹಕ ಸೇರಿ ಐದು ಜನರ ಸ್ಥಿತಿ ಗಂಭೀರವಾಗಿದೆ. ಬಸ್‌ನಲ್ಲಿದ್ದ 32 ಜನರಿಗೆ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್‌ಗೆ ರವಾನಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದ ಪ್ರಯಾಣಿಕರನ್ನು ರಾಯಚೂರಿನ ರಿಮ್ಸ್, ಸಿಂಧನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ವೇಗವಾಗಿ ಹೊರಟಿದ್ದ ಬಸ್ ಎದುರಿಗೆ ಬಂದ ಬೈಕ್‌ಗೆ ದಾರಿ ಬಿಡಲು ಹೋಗಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇಂಡಿಕೇಟರ್ ಹಾಕದೆ ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದು, ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ವೇಗವಾಗಿ ಹೊರಟಿದ್ದ ಬಸ್ ಎದುರಿಗೆ ಬಂದ ಬೈಕ್‌ಗೆ ದಾರಿ ಬಿಡಲು ಹೋಗಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇಂಡಿಕೇಟರ್ ಹಾಕದೆ ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದು, ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಸಿಂಧನೂರಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕ ಅಮರೇಶ್, ಲಾರಿ ಚಾಲಕ ನಾಗೇಶ್ವರರಾವ್ ವಿರುದ್ಧ ಪ್ರಕರಣ ದಾಖಲಾಗಿದೆ.