ಉತ್ತರ ಪ್ರದೇಶದಲ್ಲಿ ಹಲವು ವಾಹನಕ್ಕೆ ಡಿಕ್ಕಿಯಾದ ಬಸ್, ಐವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲಿಗಢದ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಐವರು ಮೃತಪಟ್ಟಿದ್ದಾರೆ.

ಜಟ್ಟಾರಿ ಮತ್ತು ತಪ್ಪಲ್ ಟೌನ್‌ಶಿಪ್ ನಡುವಿನ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.

ಪಂಜಾಬ್‌ನಿಂದ ಬರುತ್ತಿದ್ದ ಬಸ್ ಇದ್ದಕ್ಕಿದ್ದಂತೆಯೇ ನಿಯಂತ್ರಣ ಕಳೆದುಕೊಂಡಿದ್ದು, ಕಾರುಗಳು, ಟೆಂಪೋಗಳು ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಮದ್ಯಸೇವಿಸಿ ಬಸ್ ಓಡಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!