ಟ್ರಕ್‌ಗೆ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ: 18 ಜನರಿಗೆ ಗಾಯ, 8 ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಭೋರ್ಘಾಟ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಖೋಪೋಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಗಾಯಾಳುಗಳನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಸ್ಟೀರಿಂಗ್ ನಿಯಂತ್ರಣ ತಪ್ಪಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!