ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಭೀಕರ ಅಪಘಾತ: 7 ಮಂದಿ ದಾರುಣ ಸಾವು, 13 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ ಮತ್ತು 13 ಜನರಿಗೆ ಗಂಭೀರ ಗಾಯಗಳಾಗಿವೆ.

ಇಂದು ಬೆಳಗ್ಗೆ ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಸ್​ ಪುಣೆಯ ಮೆಹೆಕರ್​ನಿಂದ ಪ್ರಯಾಣಿಕರನ್ನು ಹೊತ್ತು ಬರುತ್ತಿತ್ತು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್​ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!