ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಬಾ ಜಿಲ್ಲೆಯ ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬಸ್ ಢಿಕ್ಕಿಯಾಗಿ 13 ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಅತಿವೇಗವು ಅಪಘಾತಕ್ಕೆ ಕಾರಣವಾಯಿತು ಎನ್ನಲಾಗಿದೆ.
ಗಾಯಗೊಂಡವರಲ್ಲಿ ಏಳು ಮಂದಿಗೆ ತೀವ್ರ ಗಾಯಗಳಾಗಿರುವ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಭರತ್ ಭೂಷಣ್ ತಿಳಿಸಿದ್ದಾರೆ ಎಂದು ಏಎನ್‌ಐ ವರದಿ ಮಾಡಿದೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಜೀವಹಾನಿಯಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ.
“ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ದುರದೃಷ್ಟಕರ ರಸ್ತೆ ಅಪಘಾತಗಳಲ್ಲಿ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಜಿಲ್ಲಾಡಳಿತಕ್ಕೆ ಸಾಧ್ಯವಿರುವ ಸಹಾಯ ಎಲ್ಲಾ ನೆರವು ನೀಡುವಂತೆ ನಿರ್ದೇಶನ ನೀಡಿದೆ.” ಎಂದು ಅವರು ಟ್ವೀಟ್ ಮಾಡಿದ್ದಾರೆ.