ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಂಡಕ್ಟರ್ ಸಾವನ್ನಪ್ಪಿರುವ ದುರಂತ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಈರಯ್ಯ (23) ಮೃತ ಯುವ ಕಂಡಕ್ಟರ್.
ನಿನ್ನೆ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ಬಸ್ ತೆರಳುತ್ತಿತ್ತು. ಈ ವೇಳೆ ಸರ್ಕಲ್ ನಲ್ಲಿ ಬಸ್ ತಿರುವು ಪಡೆಯುವ ರಭಸಕ್ಕೆ ಬಸ್ಸಿನ ಮುಂದಿನ ಬಾಗಿಲ ಬಳಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳದಲ್ಲಿಯೆ ಇದ್ದ ಟ್ರಾಫಿಕ್ ಪೊಲೀಸರು ಮತ್ತು ಸ್ಥಳೀಯರು ಈರಯ್ಯನ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈರಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.