ಹೊಸದಿಗಂತ ಮಂಡ್ಯ :
ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ರಸ್ತೆ ಬದಿಯ ಗದ್ದೆಗೆ ಉರುಳಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಶಿವಳ್ಳಿ-ಹಾಡ್ಯ ಗ್ರಾಮದ ಮಧ್ಯೆ ನಡೆದಿದೆ.
ಮಂಡ್ಯದಿಂದ ಶಿವಳ್ಳಿ ಮಾರ್ಗವಾಗಿ ಪಾಂಡವಪುರಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು, ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. ಘಟನೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಶಿವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.