ನೀರಿನಲ್ಲಿ ಬಸ್ ಮುಳುಗಡೆ :ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಯುವಕರು

ಹೊಸದಿಗಂತ ವರದಿ ರಾಮನಗರ:

ಕುಂಭದ್ರೋಣ ಮಳೆಗೆ ನಲುಗಿರುವ ರಾಮನಗರ ಜಿಲ್ಲೆಯಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ. ನೀರಿನಲ್ಲಿ ಮುಳುಗುತ್ತಿದ್ದ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಭಾರೀ ಮಳೆಯಿಂದ ಮದ್ದೂರಿನಿಂದ ಬೈಪಾಸ್​ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಬಸ್​ ಬಿಳಗುಂಬ ರಸ್ತೆಯ ಬಳಿ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ.

ಈ ವೇಳೆ ನೀರು ಬಸ್​ನಲ್ಲಿ ಎದೆಯ ಮಟ್ಟಕ್ಕೆ ತುಂಬಿದ ಪರಿಣಾಮ ಎಲ್ಲರು ಆತಂತಕ್ಕೆ ಒಳಗಾಗಿದ್ದಾರೆ. ಈ ವೇಳೆ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಯುವಕರು ಬಸ್​ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರಗೆ ಕರೆತರುವಲ್ಲಿ ಯಶಸ್ವಿ ಆಗಿದ್ದಾರೆ. ಇದರಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತ ತಪ್ಪಿದೆ.

ಇನ್ನು ಬೆಂಗಳೂರು-ಮೈಸೂರು ಹೆದ್ದಾರಿಯ ಬಸವನಪುರ ಬಳಿಯ ಅಂಡರ್​ಪಾಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಈ ನೀರಿನಲ್ಲಿ 3 ಕಾರುಗಳು ಮುಳಗಡೆ ಆಗಿದೆ. ಕಳೆದ ಹಲವಾರು ದಿನಗಳಿಂದ ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನಾನುಕೂಲವಾಗುತ್ತಿದ್ದರೂ ಇದನ್ನು ಸರಿಪಡಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದರು, ಸೋಮವಾರವೂ ಸಹ ಇದೇ ಜಾಗದಿಂದಾಗಿ ಹತ್ತಾರು ಕಿಮೀ ಉದ್ದದ ವಾಹನಗಳ ಸಾಲು ನಿಲ್ಲುವಂತೆ ಆಗಿದೆ.

ರೈಲು ನಿಲ್ದಾಣದಲ್ಲೂ ನೀರು: ಇನ್ನೂ ರಾಮನಗರ ಮತ್ತು ಚನ್ನಪಟ್ಟಣ ರೈಲು ನಿಲ್ದಾಣದಲ್ಲಿಯೂ ನೀರು ತುಂಬಿರುವ ಕಾರಣದಿಂದಾಗ ಕೆಲವು ರೈಲುಗಳ ಓಡಾಟದಲ್ಲಿಯೂ ಸಹ ವಿಳಂಬವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!