ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.
ಕಲ್ವಾನ್ ತಾಲೂಕಿನ ಸಪ್ತಶೃಂಗಿ ಗಢ್ ಘಾಟ್ ವಿಭಾಗದ ವಾಣಿಯಲ್ಲಿರುವ ಗಣೇಶ ದೇವಸ್ಥಾನದ ಬಳಿ ಬೆಳಿಗ್ಗೆ 5.45 ರ ಸುಮಾರಿಗೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಎಂಎಸ್‌ಆರ್‌ಟಿಸಿ ಬಸ್ ಬುಲ್ಧಾನ ಜಿಲ್ಲೆಯ ಖಮ್‌ಗಾಂವ್‌ನಿಂದ ಸಪ್ತಶೃಂಗಿ ಗಢಕ್ಕೆ ಬಂದಿತ್ತು. ಬುಧವಾರ ಬೆಳಗ್ಗೆ ಬಸ್ ವಾಪಸ್ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 150 ಅಡಿ ಆಳದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.