ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಕೋಬಾಬಾದ್ ಪ್ರದೇಶದಲ್ಲಿ ಪ್ಯಾಸೆಂಜರ್ ಕೋಚ್ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ವಾಹನವು ಬಲೂಚಿಸ್ತಾನದಿಂದ ಪಂಜಾಬ್‌ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹಗಳನ್ನು ಕೂಡ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಧಿವಿಧಾನಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಕೋಬಾಬಾದ್ ಜಿಲ್ಲೆಯ ದೈವಲ್ ಮಚ್ಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ, ದುರದೃಷ್ಟಕರ ಬಸ್ ಟೈರ್ ಸ್ಫೋಟಗೊಂಡ ನಂತರ ಕಂದರಕ್ಕೆ ಬಿದ್ದಿದೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.