ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಬಸ್ ಕೆರೆಗೆ ಬಿದ್ದ ಪರಿಣಾಮ 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ. ಮಂಗಲ್ದೋಯಿಯಿಂದ ಗುವಾಹಟಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಕೆರೆಗೆ ಬಿದ್ದಿದೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಗಾಯಾಳುಗಳ ಪೈಕಿ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಲ್ಡೊಯ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.