Thursday, September 11, 2025

ಲಕ್ನೋದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ನೋದ ಕಾಕೋರಿ ಪ್ರದೇಶದಲ್ಲಿ ರಸ್ತೆ ಮಾರ್ಗದ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ದೋಯ್ ನಿಂದ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ.ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲಕ್ನೋ ಪೊಲೀಸ್ ಆಯುಕ್ತ ಅಮರೇಂದ್ರ ಸಿಂಗ್ ಸೆಂಗಾರ್ ತಿಳಿಸಿದ್ದಾರೆ.

ಸ್ಥಳೀಯರ ಸಹಾಯದಿಂದ ರಕ್ಷಣಾ ತಂಡಗಳು ಗಾಯಗೊಂಡ ಪ್ರಯಾಣಿಕರನ್ನು ಕಾಕೋರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ